ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್ – News Kadaba

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಅ. 12. ಇವೆಂಟ್ ಮ್ಯಾನೇಜ್ಮೆಂಟ್ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತರನ್ನು ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಎಂದು ಗುರುತಿಸಲಾಗಿದೆ. ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು ಇವರು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎನ್ನಲಾಗಿದೆ. ಮದುವೆ ಇವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಪ್ರತಿ ವಾರ ಬೆಂಗಳೂರಿನಿಂದ ತಮಿಳುನಾಡಿಗೆ ಯುವತಿಯರನ್ನು ಕರೆದೊಯ್ದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳು ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್‌ಗಳಿಗೆ ಭೇಟಿ ನೀಡುತ್ತಿದ್ದವರ ಬಳಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿ ಒಬ್ಬರಿಗೆ 25 ರಿಂದ 50 ಸಾವಿರ ರೂ.ವರೆಗೆ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ನಾಲ್ವರು ಯುವತಿಯರನ್ನು ರಕ್ಷಿಸಿ, ಆರೋಪಿ ದಂಪತಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

Scroll to Top