ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com,. 12 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ.

750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದ್ದು, ಬಳಿಕ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭ ಅರಮನೆಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಲಿದ್ದು, ನಂತರ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಬೆಳಗ್ಗೆ 11ರೊಳಗೆ ಜಟ್ಟಿ ಕಾಳಗ ನಡೆಯಲಿದೆ.ಇನ್ನು ಮಧ್ಯಾಹ್ನ ಮಕರ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಾಗುತ್ತದೆ. ಬಳಿಕ ಸಂಜೆ ಕುಂಭ ಲಗ್ನ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಈ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

Also Read  ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

error: Content is protected !!
Scroll to Top