’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಅ. 12. ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು, “ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದೆ. ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ” ಎಂದರು.


ʼರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿʼ ಎಂದು ತಿಳಿಸಿದರು.

Also Read  ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..!

 

 

error: Content is protected !!
Scroll to Top