ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ

(ನ್ಯೂಸ್ ಕಡಬ) newskadaba.com ಅ. 12. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಸಿ ನಾೈಕ್, ಆಡಳಿತ ಮಂಡಳಿ ಟ್ರಸ್ಟಿ ಶ್ರೀಮತಿ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Scroll to Top