ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com,. 12 ದೆಹಲಿ:  ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ ಎಐ 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಬಾಂಬ್ ಬೆದರಿಕೆ ಬಂದ ಬಳಿಕ ವಿಮಾನವನ್ನು ದೆಹಲಿಗೆ ವಾಪಾಸ್ ತಿರುಗಿಸಲಾಯಿತು.

Also Read  ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ!

error: Content is protected !!
Scroll to Top