ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ

(ನ್ಯೂಸ್ ಕಡಬ) news kadaba.com ಅ. 14. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top