ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com,. 14 ಬಂಟ್ವಾಳ: ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು –  ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. 

ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ  ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ

error: Content is protected !!