ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 14. ಪೆಟ್ರೋಲ್ ಹಾಕಿಸಿ ಹಣ ಕೊಡದೇ ಚಾಲಕ ಕಾರಿನೊಂದಿಗೆ ಪರಾರಿಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳದ ಅನು ಪೆಟ್ರೋಲ್ ಬಂಕ್‌ಗೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ, 4253.88ರೂ. ಮೊತ್ತದ ಪೆಟ್ರೋಲ್ ಹಾಕಿಸಿಕೊಂಡು ಬಳಿಕ ಹಣ ನೀಡದೆ ಕಾರನ್ನು ಚಲಾಯಿಸಿಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!