(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ.
ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳದ ಉಪಸಾಗರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದರು. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.