ಐತ್ತೂರು: ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ರೇಡಿಯೋ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಪಂಚಾಯತ್ ವತಿಯಿಂದ ರೇಡಿಯೋ ವಿತರಿಸಲಾಯಿತು.

ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ರೇಡಿಯೋ ವಿತರಿಸಿದರು. ಈ ಸಂದರ್ಭದಲ್ಲಿ ಎನ್.ಆರ್.ಇ.ಜಿ ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಅಂಗನವಾಡಿ ಮೇಲ್ವಿಚಾರಕಿ ಭವಾನಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್‌ ರೋಡ್ರಿಗಸ್, ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರಾದ ಎಂ.ಪಿ. ಯೂಸುಫ್, ಪಿ.ಪಿ ಮತ್ತ್ಯಾಸ್, ಇಸ್ಮಾಯಿಲ್ ಎಂ.ಎಚ್, ಧರ್ಮಪಾಲ, ಶ್ರೀಧರ, ಗೋಮತಿ, ವಿಜಯಲಕ್ಷ್ಮೀ, ನಸೀರಾ ಉಪಸ್ಥಿತರಿದ್ದರು.

Scroll to Top