ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

(ನ್ಯೂಸ್ ಕಡಬ)newskadaba.com,. 14 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ,  ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು  ಭೂಕುಸಿತದ  ಅಪಾಯಕಾರಿ ಸಂಭಾವ್ಯ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ತಿಳಿಸಿದೆ.

ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ. 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ ಭೀತಿ ಉಂಟಾಗಿದೆ ಎಂದು ವರದಿ ತಿಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Also Read  ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ.!

error: Content is protected !!
Scroll to Top