ಕಡಬ: ದಲಿತ ಮುಖಂಡ ಸೇರಿ 12 ಮಂದಿ ಬೌದ್ಧ ಧರ್ಮಕ್ಕೆ ಮತಾಂತರ ► ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಚಿಂತನೆಯನ್ನು ಅಪ್ಪಿಕೊಂಡ ದಲಿತರು

(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ ‘ಮೈತ್ರಿ ವಿಹಾರ’ ಗೃಹ ಪ್ರವೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾ(ರಿ.) ನ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ ಭಂತೇಜಿಯವರು ಬುದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ ಧಮ್ಮೋಪದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಆನಂದ ಮಿತ್ತಬೈಲ್, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ರವರ ಚಿಂತನೆಯಂತೆ ನೈಜ ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ಆಶಯಗಳನ್ನು ಜೀವನದಲ್ಲಿ ಅಳವಡಿಸುವುದರ ಮೂಲಕ ಪ್ರೊ. ಬಿ.ಕೃಷ್ಣಪ್ಪರವರ ಕನಸನ್ನು ಈಡೇರಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಪುಟ್ಟಣ್ಣ, ಸುಶೀಲ, ನಯನ್ ಕುಮಾರ್, ನಮಿತ, ಸತೀಶ್ ಕುಮಾರ್, ಪ್ರೇಮ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಬೌದ್ಧ ಧರ್ಮದ ದೀಕ್ಷೆ ಪಡೆದು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.

Also Read  ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್

error: Content is protected !!
Scroll to Top