ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) news kadaba.com ಅ. 14. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅವಿನಾಶ್ (33), ಮಮತಾ (30), ಅಧಿರಾ (05), ಅಣ್ಣಯ್ಯ (03) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top