ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 14 . ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.

 

ಮೃತ ಯುವಕನನ್ನು ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಮದು ಗುರುತಿಸಲಾಗಿದೆ. ಯುವಕ. ಈತ ಭಾನುವಾರದಂದು ಗೆಳೆಯರೊಂದಿಗೆ ಮೀನು ಹಿಡಿಯಲೆಂದು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ನಾಪತ್ತೆಯಾಗಿದ್ದ ಈತನನ್ನು ಸ್ಥಳೀಯರ ನೇತೃತ್ವದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top