ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ

(ನ್ಯೂಸ್ ಕಡಬ) news kadaba.com ಅ.14. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Also Read  ಗೂಗಲ್, ಅಮೇಜಾನ್ ಬಳಿಕ ಈಗ IBM ಸರದಿ ➤ 3,900 ಸಿಬ್ಬಂದಿಗಳ ವಜಾಗೊಳಿಸಲು ನಿರ್ಧಾರ !

error: Content is protected !!
Scroll to Top