ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಹೊರ ಬಿದ್ದ ಭಾರತ – News Kadaba

ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಹೊರ ಬಿದ್ದ ಭಾರತ

(ನ್ಯೂಸ್ ಕಡಬ) newskadaba.com ಅ. 15. ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಭಾರತ ತಂಡ ಹೊರ ಬಿದ್ದಿದ್ದು, ಪಾಕಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ 54 ರನ್‌ ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ 6 ವಿಕೆಟ್‌ ನಷ್ಟಕ್ಕೆ 110 ರನ್‌ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಪಾಕಿಸ್ತಾನ 11.4 ಓವರ್‌ಗಳಲ್ಲಿ 56 ರನ್‌ಗಳಿಸಿ ಹೀನಾಯವಾಗಿ ಸೋಲನ್ನು ಒಪ್ಪಿಕೊಂಡಿತು. ಒಂದು ವೇಳೆ ಇಂದಿನ ಪಂದ್ಯದಲ್ಲಿ ಉತ್ತಮವಾಗಿ ಆಡಿ ಪಾಕಿಸ್ತಾನ ಗೆದ್ದಿದ್ದರೆ ರನ್‌ ರೇಟ್‌ ಆಧಾರದಲ್ಲಿ ಭಾರತಕ್ಕೆ ಸೆಮಿಫೈನಲ್‌ ಪ್ರವೇಶಿಸುವ ಸಾಧ್ಯತೆ ಇತ್ತು. ಈ ಮೂಲಕ ಭಾರತ 8 ವರ್ಷಗಳ ಬಳಿಕ ಗ್ರೂಪ್‌ ಹಂತದಲ್ಲೇ ಟೂರ್ನಿಯಿಂದ ನಿರ್ಗಮಿಸಿದೆ. ಭಾರತ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ವಿರುದ್ಧ ಸೋತಿದ್ದರೆ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಜಯಗಳಿಸಿತ್ತು.

Scroll to Top