ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..!

(ನ್ಯೂಸ್ ಕಡಬ) newskadaba.com ಅ. 15. ಮದರಸ ಹಾಸ್ಟೆಲ್​ ನಲ್ಲಿ ರಾತ್ರಿ ವೇಳೆ ಬಾತ್​ ರೂಂನಲ್ಲಿ ಮದರಸಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆಯಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎಂಬವರ ಪುತ್ರ ಮಹಮ್ಮದ್ ಜಹೀದ್ (12) ಎಂದು ಗುರುತಿಸಲಾಗಿದೆ. ಮೃತ ಮುಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್​ ಮರಳಿದ್ದು, ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

error: Content is protected !!
Scroll to Top