ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಅ. 15. ಗ್ರಾಮ ಆಡಳಿತಾಧಿಕಾರಿ (ವಿಎ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರದಂದು ಪ್ರಕಟಿಸಿದೆ.


ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ ಸೈಟ್‌ ನ ಲಿಂಕ್‌ ನಲ್ಲಿ ನಮೂದಿಸಿ ಫ‌ಲಿತಾಂಶವನ್ನು ಪಡೆಯಬಹುದು. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್‌ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ. ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ. 26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ನಂತರ ಅವರು ಕೂಡ ಅ. 27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group