ಸುಳ್ಯ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಶಾಲಾ ಬಸ್ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.15. ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಶಾಲಾ ವಾಹನವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸುಳ್ಯ ಸಮೀಪದ ಅಜ್ಜಾವರದಲ್ಲಿ ಗುರುವಾರದಂದು ನಡೆದಿದೆ.

ಸುಳ್ಯದ ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ಸನ್ನು ಅದರ ಚಾಲಕ ಬುಧವಾರದಂದು ಮನೆಗೆ ತೆಗೆದುಕೊಂಡು ಹೋಗಿದ್ದು, ಗುರುವಾರ ಬೆಳಿಗ್ಗೆ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಬೆಳಿಗ್ಗೆ ಆದ ಕಾರಣ ಶಾಲಾ ವಾಹನದಲ್ಲಿ ಯಾರು ಇರದಿದ್ದುದರಿಂದ ಸಂಭಾವ್ಯ ಭಾರೀ ಅನಾಹುತವೊಂದು ತಪ್ಪಿದೆ.

Also Read  ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

error: Content is protected !!
Scroll to Top