ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15.  ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ ೨೬ಕ್ಕೆ ಕೊನೆಗೊಳ್ಳಿದ್ದು, ೮೧ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್‌ ವಿಧಾನ ಸಭೆ 2025ರ ಜನವರಿ 5 ರಂದು ಅವಧಿ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರು  ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟವು ಅಧಿಕಾರದಲ್ಲಿದೆ.

Also Read  ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್

 

 

error: Content is protected !!
Scroll to Top