‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ‘ಕುಸುಮ್‌– ಸಿ’ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಕುಸುಮ್‌ ಸಿ ಯೋಜನೆಯಡಿ ಮೊದಲ ಹಂತದ ಅನುಷ್ಠಾನವನ್ನು ತ್ವರಿತಗೊಳಿಸುವ ಜೊತೆಗೆ, ಎರಡನೇ ಹಂತದ ಯೋಜನೆಗೆ ಟೆಂಡರ್‌ ಪ್ರಕ್ರಿಯೆಯನ್ನ ತ್ವರಿತವಾಗಿ ಆರಂಭಿಸಬೇಕು ಎಂದು ತಾಕೀತು ಮಾಡಿದರು. ಅಲ್ಲದೇ, ಎಷ್ಟು ಫೀಡರ್‌ಗಳಿಗೆ ಯಾವ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸಲಾಗುತ್ತದೆ ಎಂಬ ಬಗ್ಗೆ ಕೆಪಿಟಿಸಿಎಲ್‌ಗೆ ಮಾಹಿತಿ ನೀಡಬೇಕು. ಅದರನ್ವಯ, ಅಗತ್ಯಕ್ಕೆ ತಕ್ಕಂತೆ ಸಬ್‌ಸ್ಟೇಷನ್‌ಗಳ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

Also Read  ರಿಲಯನ್ಸ್‌ ಮಹತ್ವದ ಯೋಜನೆ - ವಿಶ್ವದ ಅತಿದೊಡ್ಡ AI ಡೇಟಾ ಸೆಂಟರ್ ನಿರ್ಮಾಣ

 

error: Content is protected !!
Scroll to Top