ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಶಬಾನಾ (44) ಎಂದು ಗುರುತಿಸಲಾಗಿದೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಈ ಘಟನೆ ಬಳಿಕ ಮನನೊಂದು ಶಬಾನಾ ಅವರು ನಿದ್ರೆ ಮಾತ್ರೆಗಳ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

Also Read  ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

 

error: Content is protected !!
Scroll to Top