ರಾಜ್ಯಾದ್ಯಂತ ಆ.17ರಂದು ಆರೋಗ್ಯ ಸೇವೆಯಲ್ಲಿ ಸ್ಥಗಿತ

(ನ್ಯೂಸ್ ಕಡಬ) newskadaba.com ಅ.15. ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ನಿರ್ಧರಿಸಿರುವುದಾಗಿ ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಅ.17ರಂದು ಬೆಳಗ್ಗೆ 6 ರಿಂದ ಮರುದಿನ ಬೆಳಿಗ್ಗೆ 6ರ ವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಐಎಂಎ ಕರ್ನಾಟಕ ಘಟಕ ನಿರ್ಧರಿಸಿದಲ್ಲದೇ ತುರ್ತು ಸೇವೆಗಳನ್ನು ಹೊರತುಪಡಿಸಿ ಬೇರೆ ಸೇವೆಗಳು ಇರುವುದಿಲ್ಲ ಎಂದೂ ತಿಳಿಸಿದೆ.

Also Read  ದೀಕ್ಷಾ ಭೂಮಿ ಯಾತ್ರೆ ನಿಯೋಜನೆಗೆ ಅರ್ಜಿ ಆಹ್ವಾನ

ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಿರುವುದು ಹಾಗೂ ಆಸ್ಪತ್ರೆಯಲ್ಲಿ ಅಗತ್ಯ ಭದ್ರತಾ ಸಿಬ್ಬಂದಿಯ ಕೊರತೆ ಇರುವುದು ಕಂಡು ಬದಿದೆ. ಇದರಿಂದಾಗಿಯೇ ದುಷ್ಕರ್ಮಿಗಳು ಸುಲಭವಾಗಿ ತರಬೇತಿ ನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ. ಕಾಲಮಿತಿಯೊಳಗೆ ತನಿಖೆ ನಡೆಸಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು ಎಂದು ಐಎಂಎ ಆಗ್ರಹಿಸಿದೆ.

error: Content is protected !!
Scroll to Top