ತಲಕಾವೇರಿ: ನಾಳೆ ಪವಿತ್ರ ತೀರ್ಥೋದ್ಭವ

(ನ್ಯೂಸ್ ಕಡಬ)newskadaba.com,. 14 ಮಡಿಕೇರಿ: ಕಾವೇರಿಯ ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌. ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ| ಮಂತರ್‌ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ.ಪೊಲೀಸ್‌ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‌ಗಳು ಓಡಾಡಲಿವೆ.

Also Read  ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..!

error: Content is protected !!
Scroll to Top