ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ವೇಣೂರು, ಅ. 16. ಕಾಲೇಜು ವಿದ್ಯಾರ್ಥಿನಿಯರಿಗೆ ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಯುವಕನೊಬ್ಬನನ್ನು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ನೆರವಿನಿಂದ ವೇಣೂರು ಪೊಲೀಸರು ಬಂಧಿಸಿದ್ದಾರೆ.

ವೇಣೂರಿನ ಗೋಳಿಯಂಗಡಿಯಲ್ಲಿರುವ ಪ್ರತಿಷ್ಠಿತ ಧರ್ಮಸ್ಥಳ ಐ ಟಿ ಐ ಕಾಲೇಜಿಗೆ ಹೋಗುತ್ತಿರುವ ವಿದ್ಯಾರ್ಥಿನಿಯರನ್ನು ಅವ್ಯಾಚ್ಯ ಶಬ್ದಗಳಿಂದ ಮಾತನಾಡುತ್ತಾ, ನಿನ್ನ ಮೊಬೈಲ್ ನಂಬರ್ ಕೊಡು, ಪ್ರತಿದಿನ ಬೈಕಿನಲ್ಲಿ ಕಾಲೇಜಿಗೆ ಡ್ರಾಪ್ ಮಾಡುತ್ತೇನೆ ಎಂದು ಪೀಡಿಸುತ್ತಿದ್ದನು. ಇದರಿಂದ ಗಾಬರಿಗೊಂಡ ಯುವತಿಯು ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ತಿಳಿಸಿದ್ದಾಳೆ ಎನ್ನಲಾಗಿದೆ.

Also Read  ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ

 

 

error: Content is protected !!
Scroll to Top