ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ. 16. ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಗ್ಗೆ 11:30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಆರ್ಟಿಕಲ್ 370 ರದ್ಧತಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮೊದಲ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಜನರಲ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

Also Read  ಮದ್ಯ ಸೇವಿಸಿ ಪರಸ್ಪರ ವಿವಾಹವಾದ ಯವಕರು..!!   ➤ದೂರು ದಾಖಲು

 

 

error: Content is protected !!
Scroll to Top