(ನ್ಯೂಸ್ ಕಡಬ) newskadaba.com ಅ.16. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆಯೂ ತಿಳಿಸಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.