ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, . 16. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಮರೀಗೌಡ ಅವರು ಇಂದು ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಅಂತಾ ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯ ಹೊರಬರುತ್ತೆ ಎಂದು ತಿಳಿಸಿದರು.

Also Read  ಇಂದಿನಿಂದ ಮೇ 20ರ ವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ⛈️ ಹವಾಮಾನ ಇಲಾಖೆ ಮುನ್ಸೂಚನೆ

 

error: Content is protected !!
Scroll to Top