ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ – News Kadaba

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಅ.16. ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಡಲಾಗಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಮಾಹಿತಿಯ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾಗಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಎಂಬವರನ್ನು ವಿಚಾರಣೆ ನಡೆಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆವರಣದಲ್ಲಿದ್ದ ಒಟ್ಟು 40 ಕೆ.ಜಿ. ಪಟಾಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Scroll to Top