ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಅ.16. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾದ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರದಂದು ಲೋಕಾರ್ಪಣೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Also Read  ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಜೊತೆಗಿದ್ದರು. ಜೈಕಾ (ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ. ಲೋಕಾರ್ಪಣೆಗೊಳಿಸಿದ ಸವಿನೆನಪಿಗಾಗಿ ಮುಖ್ಯಮಂತ್ರಿಗಳು, ಉಪಮಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಡಲಾಯಿತು.

Also Read  ದ.ಕ: ಅನ್ ಲಾಕ್ ಮಾರ್ಗಸೂಚಿ ಬದಲಾವಣೆ ➤ ವೀಕೆಂಡ್ ಕರ್ಫ್ಯೂ ವೇಳೆ ಮಧ್ಯಾಹ್ನ 2ರ ವರೆಗೆ ಮಾತ್ರ ಅವಕಾಶ- ಡಿ.ಸಿ

 

error: Content is protected !!
Scroll to Top