ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 17. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ಕೋರ್ಸ್ ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ಸಲ್ಲಿಸಲು ವೆಬ್ ಸೈಟ್ ssp.postmatric.karnataka.gov.in  ಸಂಪರ್ಕಿಸಬಹುದು. ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ bcwd.karnataka.gov.in ಸಂಪರ್ಕಿಸಬಹುದು.

Also Read  ಕರಾವಳಿಯಲ್ಲಿ ಮರಳುಗಾರಿಕೆಗೆ ವಿಶೇಷ ರಿಯಾಯಿತಿ ➤ ಗ್ರಾ.ಪಂ. ವ್ಯಾಪ್ತಿಯ ಮರಳುಗಾರಿಕೆಗೆ ಆಯಾ ಗ್ರಾ.ಪಂ. ಗಳಿಗೆ ಅಧಿಕಾರ

ಹೆಚ್ಚಿನ ಮಾಹಿತಿಗೆ ಇಲಾಖೆಯ ಸಹಾಯವಾಣಿ 8050770005, ಇ-ಮೇಲ್ bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902, ಇ-ಮೇಲ್ postmatrichelp@karnataka.gov.in ಸಂಪರ್ಕಿಸುವಂತೆ ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top