ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್ ಖನ್ನಾ ಶಿಫಾರಸು

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 17. ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರನ್ನಾಗಿ ಸುಪ್ರೀಂಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.

ಈ ಶಿಫಾರಸನ್ನು ಕೇಂದ್ರ ಸರಕಾರ ಅಂಗೀಕರಿಸಿದರೆ ನ್ಯಾ.ಸಂಜೀವ್ ಖನ್ನಾ ಭಾರತದ ಸುಪ್ರೀಂ ಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ಅವರ ಸೇವಾವಧಿ ಇನ್ನು ಆರು ತಿಂಗಳು ಇರಲಿದ್ದು, ಮೇ 13, 2025ರಂದು ನಿವೃತ್ತರಾಗಲಿದ್ದಾರೆ.

Also Read  ಲೋಕಸಭೆಯಲ್ಲಿ ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ

 

error: Content is protected !!
Scroll to Top