ಬೀದಿನಾಯಿಗಳ ದಾಳಿಗೆ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಚಿತ್ರದುರ್ಗ, ಅ. 17. ಬೀದಿನಾಯಿಗಳ ದಾಳಿಗೆ ಒಳಗಾಗಿ 11 ವರ್ಷದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ರಾಂಪುರ ಗ್ರಾಮದ ಮಿಥುನ್(11) ಎಂದು ಗುರುತಿಸಲಾಗಿದೆ.


ಮಿಥುನ್ ಟ್ಯೂಷನ್ ಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಬೀದಿನಾಯಿಗಳು ದಾಳಿ ಮಾಡಿವೆ. ಬೀದಿನಾಯಿಗಳು ಮಿಥುನ್ ತಲೆ, ಕೆನ್ನೆ, ಮೈಯೆಲ್ಲಾ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಆಟೋ ಚಾಲಕ ರಾಜಪ್ಪ ಎಂಬವರು ಮಿಥುನ್ ನನ್ನು ನಾಯಿಗಳಿಂದ ರಕ್ಷಿಸಿದ್ದಾರೆ. ಬಳಿಕ ಆತನನ್ನು ರಾಂಪುರ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮಿಥುನ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

Scroll to Top