ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ

(ನ್ಯೂಸ್ ಕಡಬ) newskadaba.com ಬೋನಸ್ ಐರಿಸ್, ಅ. 17. ಬ್ರಿಟನ್‌ನ ಖ್ಯಾತ ಪಾಪ್ ಗಾಯಕ, ಲಿಯಾಮ್ ಪಾಯ್ನ್(31) ಅವರು ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್‌ನಲ್ಲಿ ತಂಗಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಮೃತಪಟ್ಟಿದ್ದಾರೆ ಎಂದು ಬೋನಸ್ ಐರಿಸ್ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಬೋನಸ್ ಐರಿಸ್ ಭದ್ರತಾ ಮುಖ್ಯಸ್ಥ, ‘ಸಂಜೆ ಐದು ಗಂಟೆ ವೇಳೆಗೆ ಘಟನೆ ನಡೆದಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಆ ವೇಳೆಗಾಗಲೆ ಲಿಯಾಮ್ ನಿಧನ ಹೊಂದಿದ್ದರು. ಆತ ಬಹಳ ಒರಟು ಹಾಗೂ ಮಾದಕ ದ್ರವ್ಯ ವ್ಯಸನಿಯಾಗಿದ್ದರು. ಮಾದಕ ವಸ್ತು ಸೇವಿಸಿಯೇ ಆತ ಈ ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Also Read  ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..!

 

error: Content is protected !!
Scroll to Top