ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾವೇರಿ, ಅ. 17. ಭಾರೀ ಮಳೆಯ ವೇಳೆ ಬಾಲಕನೋರ್ವ ಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿ ನಗರದ 3ನೇಕ್ರಾಸ್ ನಲ್ಲಿ ಸಂಭವಿಸಿದೆ.

ಮೃತನನ್ನು ನಿವೇದನ್ ಗುಡಗೇರಿ(10) ಎಂದು ಗುರುತಿಸಲಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದ ಇಂದು ನಸುಕಿನ ವರೆಗೆ ಭಾರೀ ಮಳೆಯಾಗಿದೆ. ಮಳೆಯಬ್ಬರಕ್ಕೆ ಕಾಲುವೆ ಹಾಗೂ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಹಾಗೂ ನಗರಸಭೆ ಸಿಬ್ಬಂದಿ ಬಾಲಕನನ್ನು ಪತ್ತೆ ಹಚ್ಚಿದ್ದರು. ತಕ್ಷಣ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.

Also Read  ಸಿ.ಟಿ ರವಿ ಪ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು

 

error: Content is protected !!
Scroll to Top