ಬಿಜೆಪಿ ಟಿಕೆಟ್ ವಂಚನೆ: ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್

(ನ್ಯೂಸ್ ಕಡಬ) newskadaba.com .18, ಬೆಂಗಳೂರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇವರುಗಳು ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ, ಹಣ ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫುಲ್ ಸಿಂಗ್ ಅವರ ಪತ್ನಿ ಸುನೀತಾ ಚವ್ಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Also Read  ಠೇವಣಿ ಮೇಲಿನ ಬಡ್ಡಿ ದರ ಇಳಿಸಿದ ಇಪಿಎಫ್‌ಐ

error: Content is protected !!
Scroll to Top