(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ.18. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ಎಸಿಎಫ್ ಆಂಟನಿ ಎಸ್. ಮರಿಯಪ್ಪ ಕೆನಡಾದ ಪರಿಸರ ಚಿಂತಕ ಡಾ.ಸಿ. ರಾಜಶೇಖರ ಮೂರ್ತಿ, ಪರಿಸರವಾದಿ ಡಾ.ಎಂ.ಡಿ. ಸುಭಾಸ್ ಚಂದ್ರನ್ ಮಾತನಾಡಿದರು. ಡಾ.ಹರೀಶ ಕೃಷ್ಣ ಮೂರ್ತಿ , ಬಿಎಂ. ಕೃಷ್ಣ ಮೂರ್ತಿ, ಸಂಘಟನಾ ಕಾರ್ಯದರ್ಶಿ ಡಾ.ಎಸ್. ವಿನಯ್ ಉಪಸ್ಥಿತರಿದ್ದರು.