ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

crime, arrest, suspected


(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.







ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(ಬಿ) (6), ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top