ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ಕನ್ನಡ ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ಗುರುವಾರ ವಿಧಿವಶರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್‌ ಅವರು ನಿಧನರಾಗಿದ್ದಾರೆಂದು ಎಂದು ತಿಳಿದುಬಂದಿದೆ. ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆಂದು ವರದಿಗಳು ತಿಳಿದುಬಂದಿದೆ. ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿದ್ದು, ಇದಕ್ಕಾಗಿ ಡಯಾಲಿಸಿಸ್ ಕೂಡ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Also Read  ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

 

error: Content is protected !!
Scroll to Top