‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com .18,ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ -ಎಐ ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವಿಡಿಯೋಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಹೇಳಿದರು.

Also Read  ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ

error: Content is protected !!
Scroll to Top