(ನ್ಯೂಸ್ ಕಡಬ) newskadaba.com ಅ.19, ಮುಂಬೈ: ಎನ್ ಸಿಪಿ ಬಣದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಶುಕ್ರವಾರದಂದು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬಂಧಿತ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಐವರು ಆರೋಪಿಗಳನ್ನು ನ್ಯಾಯಾಲಯ ಅಕ್ಟೋಬರ್ 25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಇಬ್ಬರು ಶೂಟರ್‌ಗಳನ್ನು ಬಂಧಿಸಲಾಗಿದ್ದು, ಓರ್ವ ಪ್ರಮುಖ ಶೂಟರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಶೋಧ ನಡೆಯುತ್ತಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ .ಬಂಧಿತ ಐವರು ಆರೋಪಿಗಳು ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಹಣವನ್ನು ನೀಡುತ್ತಿದ್ದರು. ಅವರು ಫೋನ್ ಮೂಲಕ ಬಿಷ್ಣೋ ಯ್ ಗ್ಯಾಂಗ್ ಸಂಪರ್ಕ ಹೊಂದಿದ್ದಾರೆಂದು ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.