ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರುತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

Also Read  ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಟ್ವೀಟ್ ➤ ಆರೋಪಿ ಅರೆಸ್ಟ್

 

 

error: Content is protected !!
Scroll to Top