ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಜೈಪುರದಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ದೆಹಲಿ, ಅ. 19. ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಇಂದು ಬೆಳಗ್ಗೆ ಜೈಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. 189 ಪ್ರಯಾಣಿಕರಿದ್ದ ವಿಮಾನವು ಬೆಳಗಿನ ಜಾವ 1.20ಕ್ಕೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Also Read  ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

 

 

error: Content is protected !!
Scroll to Top