(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2 (ಎಸ್‌ಎ-2) ಮತ್ತು 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ನಡೆಯುವ ಮಂಡಳಿ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಲುಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್‌ನಂತಹ ಸುಧಾರಣಾ ಕ್ರಮಗಳನ್ನು ಪರಿಚಯಿಸಲಾಗಿದೆ.