ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 19. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು, ತರಬೇತಿ ಅವಧಿಯಲ್ಲಿ ರೂ. 15,000 ಸ್ಟೆöಪಂಡ್ ನೀಡಲಾಗುವುದು. ಅರ್ಜಿ ಸಲ್ಲಿಸಲು ನವಂಬರ್ 5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರವಾರ ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ: 9480841234 ನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ

 

 

error: Content is protected !!
Scroll to Top