ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com .19, ಬೆಂಗಳೂರು:  ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Also Read  ಇಂದು ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ

error: Content is protected !!
Scroll to Top