ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.


ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ. ಚುನಾವಣೆಗೆ ನ.6ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ನ.15 ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನ. ಅಗತ್ಯ ಬಿದ್ದರೆ ನ.23ರ ಶನಿವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 26ರಂದು ತಾಲೂಕು ಕೇಂದ್ರಗಳಲ್ಲಿ ಯತಗಳ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Also Read  ಪುತ್ತೂರು: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ

 

 

error: Content is protected !!
Scroll to Top