ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ವಶಕ್ಕೆ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 19. ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ವಾಹನ ಚಾಲಕನನ್ನು ಬಂಧಿಸಿ, ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಸಚಿನ್ ಮೇನಕುದುಳೆ, ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ. ಇನ್ನೂ ಜಪ್ತಿಯಾದ ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತಿರೋದಾಗಿ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.

Also Read  ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ

 

 

error: Content is protected !!
Scroll to Top