ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!



(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ.







ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಮೀನು ಸಾಗಿಸುವ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆಯಿಂದಾಗಿ ಟಿಪ್ಪರ್ ಕ್ರಿಸ್ತಿ ಅವರ ಸ್ಕೂಟರ್‌ಗೆ ಡಿಕ್ಕಿಯಾಗಿದೆ.ಘಟನೆ ಬಳಿಕ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.






 

 

error: Content is protected !!
Scroll to Top