ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ

(ನ್ಯೂಸ್ ಕಡಬ) newskadaba.com .21 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ನ ಲ್ಲಿ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರನ್ನು ಭಾನುವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ.

ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್ ನಿಂದ ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ಗೆ ಸಂಪರ್ಕಿಸುತ್ತದೆ.

Also Read  ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

error: Content is protected !!
Scroll to Top